ರಾಮನಗರ: ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಬೆಂಗಳೂರು ದಣ ಜಿಲ್ಲೆಯ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ವತಿಯಿಂದ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ಒಂದು ದಿನದ ಉದ್ಯಮಶೀಲತಾಭಿವೃದ್ಧಿ ತಿಳುವಳಿಕೆ ತರಬೇತಿ ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಭಾಗವಹಿಸುವರರು 18 ದಿಂದ 40 ವರ್ಷದವರಾಗಿರಬೇಕು ಹಾಗೂ ಎಸ್ಸೆಸ್ಸೆಲ್ಸಿ ತೆರ್ಗಡೆಯಾಗಿರಬೇಕು. ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ, ನಿರುದ್ಯೋಗಿ ಯುವಕರಿಕಗೆ, ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಅ.24ರೊಳಗೆ ಜಿಲ್ಲಾ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ನಂ. 208, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ ಸಂಪರ್ಕಿಸುವಂತೆ ಸಿಡಾಕ್ನ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.