ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

111111111
Published on

ಧಾರವಾಡ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಧು- ವರರು ಸಾಮೂಹಿಕ ವಿವಾಹದಲ್ಲಿ ಆಗುವ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಪ್ರೋತ್ಸಾಹಧನ ಹಾಗೂ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಸ್ವಯಂ ಸೇವಾ ಸಂಸ್ಥೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net