ಬುಕ್ ಬ್ರಹ್ಮ ಕಥಾ ಸ್ಪರ್ಧೆ,ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ; ಕಾದಂಬರಿಗೆ 1 ಲಕ್ಷ, ಕಥೆಗೆ 50 ಸಾವಿರ ಬಹುಮಾನ

bb
Published on

ಬೆಂಗಳೂರು: ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ ಹಾಗೂ ಉತ್ತಮ ಕಾದಂಬರಿಗೆ ಪುರಸ್ಕಾರ ನೀಡಲು ಆಹ್ವಾನಿಸಿದೆ.

2024ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ನೀಡಲಾಗುವುದು.

ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂ.ನಗದು ಬಹುಮಾನ, ದ್ವೀತಿಯ ಬಹುಮಾನ 25 ಸಾವಿರ ರೂ. ತೃತೀಯ ಸ್ಥಾನಕ್ಕೆ 15 ಸಾವಿರ ರೂ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ 17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಎಲ್ಲ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

ಕಾದಂಬರಿ ಹಾಗೂ ಕಥೆ ಸ್ವತಂತ್ರವಾಗಿರಬೇಕು. ಕಾದಂಬರಿ 2024ರಲ್ಲಿ ಮೊದಲ ಮುದ್ರಣಗೊಂಡಿರಬೇಕು. ನಾಲ್ಕು ಪ್ರತಿಗಳನ್ನು ಮೇ.1ರೊಳಗಾಗಿ ಕಳುಹಿಸಬೇಕು. ತೀರ್ಪುಗಾರರ ನಿರ್ಣಯವೇ ಅಂತಿಮ.

ಜು.6 ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 5 ಕಾದಂಬರಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಆ.8 ರಿಂದ ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಪುರಸ್ಕೃತರ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು. ಕಥೆ, ಕಾದಂಬರಿ ಕಳುಹಿಸಬೇಕಾದ ವಿಳಾಸ : ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ, ಮೂರನೇ ಮಹಡಿ, ಆರ್.ಕೆ. ಕಾಂಪ್ಲೆಕ್ಸೃ್, ಕೆಎಸ್‌ಎಸ್‌ಐಡಿಸಿ ಆವರಣ, ಎಲೆಕ್ಟ್ರಾನಿಕ್ ಸಿಟಿ ಮೊದಲ ಹಂತ, ಬೆಂಗಳೂರು-560100. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net