ಕಡಣಿ ಸಾಹಿತ್ಯ ಸಮ್ಮೇಳನ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

Invitation for works for the Kadani Sahitya Sammelana Endowment Award
Published on

ವಿಜಯಪುರ: ಕಳೆದ ಸಾಲಿನ ಕಡಣಿ ಸಾಹಿತ್ಯ ಸಮ್ಮೇಳನ ದತ್ತಿ ಪ್ರಶಸ್ತಿಗೆ 2024ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಆಹ್ವಾನಿಸಲಾಗಿದೆ.

2020ರಲ್ಲಿ ಆಲಮೇಲ ಕಸಾಪ ತಾಲೂಕು ಘಟಕ ಕಡಣಿ ಸಾಹಿತ್ಯ ಸಮ್ಮೇಳನದ ನೆನಪಿಗೆ ಕೇಂದ್ರ ಪರಿಷತ್‌ನಲ್ಲಿ 75 ಸಾವಿರ ರೂ. ದತ್ತಿ ನಿಧಿ ಸ್ಥಾಪಿಸಲಾಗಿದೆ. ಜಿಲ್ಲೆಯ ಆಸಕ್ತ ಲೇಖಕರು ಏ. 30 ರೊಳಗೆ ನಗರದ ಹಳೆಯ ತಹಸೀಲ್ದಾರ್ ಕಚೇರಿ ಬಳಿಯ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರಿಗೆ ತಮ್ಮ ಕೃತಿಯ ಎರಡು ಪ್ರತಿಗಳನ್ನು ಸಲ್ಲಿಸಬೇಕು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಜುಲೈ ತಿಂಗಳಲ್ಲಿ ಆಲಮೇಲದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ. 9448035775ಕ್ಕೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net