

ಸುಬ್ರಹ್ಮಣ್ಯ: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯ ಆಮಂತ್ರಣ ಪತ್ರಿಕೆಯನ್ನು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ನೀಡಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಆಮಂತ್ರಣ ನೀಡುವ ಮೂಲಕ ವಿರಾಟ್ ದೇವತಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಬಳಿಕ ದೇವಳದಿಂದ ಭೀಜನ ಸಾಮಗ್ರಿ ಸೇರಿದಂತೆ ಹಸಿರು ಕಾಣಿಕೆಯನ್ನು ಮಧೂರು ದೇವಳಕ್ಕೆ ಹಸ್ತಾಂತರಿಸಲಾಯಿತು. ದೇವಳದ ಅಭಿಯಂತ ಉದಯ ಕುಮಾರ್, ಕೆ.ಎಂ.ಗೋಪಿನಾಥ್ ನಂಬೀಶ, ಸರಸ್ವತಿ ಉಪಸ್ಥಿತರಿದ್ದರು.