

ಉಡುಪಿ: ಮಕ್ಕಳಲ್ಲಿ ಕೃಷಿ ಬಗ್ಗೆ ಆಸಕ್ತಿ ಬೆಳೆಸುವುದು ಅಗತ್ಯ. ಇದರಿಂದ ಕೃಷಿ ಉಳಿಯಲು ಸಾಧ್ಯ. ಸುಲಭದ ಬೆಳೆಯನ್ನು ಬೆಳೆಯುವ ಮೂಲಕ ಕೃಷಿ ಭೂಮಿ ಹಡಿಲು ಬೀಳದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕೃಷಿಕ ಸಂದ ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಹೇಳಿದರು.
ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಜಿಲ್ಲಾ ಕೃಷಿಕ ಸಂದ ವತಿಯಿಂದ ಫೆ. 8ರಂದು ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ರೈತ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ರೈತರು ಆದ್ಯತೆ ನೀಡಬೇಕು. ರೈತರ ನಿರಂತರ ಒತ್ತಾಯದ ಲವಾಗಿ ಕೇಂದ್ರ ಸರ್ಕಾರ ಪ್ರತಿ ವರ್ಷ ಎಂಎಸ್ಪಿ ದರ ಏರಿಕೆ ಮಾಡುತ್ತಿದೆ. ರೈತ ಸಮಾವೇಶದ ಮೂಲಕ ವಿವಿಧ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ನಿತ್ಯಾನಂದ ಸ್ವಾಮಿ ಮಂದಿರದ ಆಡಳಿತ ಟ್ರಸ್ಟಿ ಕೆ.ದಿವಾಕರ ಶೆಟ್ಟಿ ಕೊಡವೂರು, ಉದ್ಯಮಿ ಕೆ. ಸತ್ಯೇಂದ್ರ ಪೈ, ಪ್ರಗತಿಪರ ಕೃಷಿಕ ರಾಜಾರಾಮ್ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕೃಷಿಕ ಸಂದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಕಾರ್ಯದರ್ಶಿ ಶ್ರೀನಿವಾಸ ಬಲ್ಲಾಳ್, ಶ್ರೀನಿವಾಸ ಶೆಟ್ಟಿ ಹೆರ್ಗ, ರವೀಂದ್ರ ಗುಜ್ಜರಬೆಟ್ಟು ಉಪಸ್ಥಿತರಿದ್ದರು.