ಸಾಲ-ಸೌಲಭ್ಯ ಒದಗಿಸಲು ಅರ್ಜಿಗಳ ಆಹ್ವಾನ

application
Published on

ಮೈಸೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024/25ನೇ ಸಾಲಿಗೆ ಸಾಲ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ www.kacdckarnataka.gov.in  ವೆಬ್‌ಸೈಟ್ ಮೂಲಕ ಆಗಸ್ಟ್ 31 ರೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ್ದು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ "ನಮೂನೆ-ಜಿ"ಯಲ್ಲಿ ಪಡೆದಿದ್ದು, ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಮತ್ತು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಳಿಗೆ ಶೇ.5% ಮೀಸಲಾತಿಯಿದ್ದು, ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net