ಮೋಪಾಲ ದೇಗುಲದಲ್ಲಿ ಆಮಂತ್ರಣ ಬಿಡುಗಡೆ

New Project (4)
Published on

ಕಾಸರಗೋಡು: ಮೋಪಾಲ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಏ.27ರಂದು ಜರುಗಲಿದ್ದು, ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಎಡನೀರು ಮಠದಲ್ಲಿ ಜರುಗಿತು.

ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ಕೆ.ಎಂ.ಹೇರಳ, ಸೂರ್ಯ ಭಟ್ ಎಡನೀರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಧಾರ್ಮಿಕ ಮುಂದಾಳು, ಉದ್ಯಮಿ ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸುವರು. ತಂತ್ರಿ ರಾಮಚಂದ್ರ ಭಟ್ ಕಾಟುಕುಕ್ಕೆ, ಎಡನೀರು ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ಉದ್ಯಮಿ ಮಧುಸೂಧನ ಆಯರ್ ಮಂಗಳೂರು, ನಿವೃತ್ತ ಐಎಎಸ್ ಅಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಡಾ.ನಾಗರಾಜ ಭಟ್, ಉದ್ಯಮಿಗಳಾದ ಶಿವಶಂಕರ್ ನೆಕ್ರಾಜೆ, ಗೋಪಾಲಕೃಷ್ಣ ಪೈ ಬದಿಯಡ್ಕ, ನಿತ್ಯಾನಂದ ಶೆಣೈ ಬದಿಯಡ್ಕ, ಡಾ.ಶ್ರೀನಿಧಿ ಸರಳಾಯ, ಎಸ್.ಎನ್.ಮಯ್ಯ ಬದಿಯಡ್ಕ, ಕೆ.ಮಾಧವ ಹೇರಳ, ಕೆ.ವಿ.ಬಾಲಕೃಷ್ಣ ಆಚಾರಿ ಕಳೇರಿ, ಡಾ.ಉಮಾಮಹೇಶ್ವರಿ, ನಿವೃತ್ತ ಶಿಕ್ಷಕಿ ಸರಸ್ವತೀ ಬೇಳ ನಿವೃತ್ತ ಬ್ಯಾಂಕ್ ಪ್ರಬಂಧಕಿ ಭಾನುಮತಿ ಮೊದಲಾದವರು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net