

ಬ್ಯಾಡಗಿ: ಮಳೆಯಾಶ್ರಿತ ಮುಸುಕಿನ ಜೋಳ ಬೆಳೆ ರೈತರಿಗೆ ತಾಲೂಕು ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶಾಂತಾಮಣಿ ಜಿ. ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಈ ಪ್ರಶಸ್ತಿಗಾಗಿ ತಾಲೂಕಿನ ಆಸಕ್ತ ರೈತರು ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿಯಲ್ಲಿರುವ ನಿಯಮ ಪಾಲಿಸುವ ಮೂಲಕ ಅಗತ್ಯ ದಾಖಲೆ ಸಲ್ಲಿಸಬೇಕು. ಮಹಿಳೆಯರಿಗೆ ಹೆಚ್ಚಿನ ಅವಕಾಶವಿದ್ದು, ಕನಿಷ್ಟ ಒಂದು ಎಕರೆ ಜಮೀನಿನಲ್ಲಿ ಬೇಸಾಯ ಮಾಡುತ್ತಿರಬೇಕು. ಮಳೆಯಾಶ್ರಿತ ಮುಸುಕಿನ ಜೋಳ ಬೆಳೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.