ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ

application
Published on

ಮೈಸೂರು:2024/25 ನೇ ಸಾಲಿನಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಸಂಶೋಧನೆ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ (J.R.F ಮಾದರಿ) ಫೆಲೋಶಿಪ್ ನೀಡಲು ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ರೂ.8 ಲಕ್ಷಗಳನ್ನು ಮೀರಬಾರದು. ವಿದ್ಯಾರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ವರ್ಷ ಮೀರಬಾರದು ಹಾಗೂ ಕೋರ್ಸ್- ಪೂರ್ಣಕಾಲಿಕ ಸ್ನಾತಕೋತ್ತರವಾಗಿರಬೇಕು.

ಸದರಿ ಅರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು https://sevasindhu.karnataka.gov.in/Sevasindhu/DepartmentServices ಆನ್‌ಲೈನ್ ಮೂಲಕ ಆಗಷ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net