

ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವತಿಯಿಂದ 2023/24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ "ಸ್ವಯಂ ಉದ್ಯೋಗ ಯೋಜನೆ"ಯಡಿ ನಿಗಮದಿಂದ ಸಹಾಯಧನ ಸೌಲಭ್ಯವನ್ನು ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯದಲ್ಲಿನ ಖಾಯಂ ನಿವಾಸಿಯಾದ ಮತೀಯ ಅಲ್ಪಸಂಖ್ಯಾತರ ವರ್ಗಗಳ ಜನರಿಗೆ ಸ್ವಯಂ ಉದ್ಯೋಗ ಯೋಜನೆಯಡಿ "ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು