ಸಹಾಯಧನಕ್ಕೆ ಅರ್ಜಿ ಆಹ್ವಾನ

application
Published on

ಮೈಸೂರು: ಮೀನುಗಾರಿಕೆ ಇಲಾಖೆಯ ಜಿಲ್ಲಾ ವಲಯ ಹಾಗೂ ರಾಜ್ಯ ವಲಯ ಯೋಜನೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಗಳಡಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಡಿ ಮೀನುಗಾರರಿಗೆ ಅಗತ್ಯವಿರುವ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ ಅಂಚಿನಲ್ಲಿ ಕೊಳ ನಿರ್ಮಾಣಕ್ಕೆ ಸಹಾಯಧನ, ಮೀನು ಮಾರಾಟಕ್ಕೆ ಮತ್ಸವಾಹಿನಿ ಸಹಾಯಧನವನ್ನು ನೀಡಲಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಜುಲೈ 29 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಹಾಗೂ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಕೆ.ಆರ್. ನಗರ, ನಂಜನಗೂಡು ಹಾಗೂ ತಿ.ನರಸೀಪುರ ತಾಲ್ಲೂಕುಗಳ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net