ಪ್ರೋತ್ಸಾಹಧನ ಪಡೆಯಲು ಅರ್ಜಿ ಸಲ್ಲಿಸಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಹ್ವಾನ

disabled
Published on

ಮಂಡ್ಯ: ಅಂತಾರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯಮಟ್ಟದಲ್ಲಿ 2024 ಜ.1ರಿಂದ ಡಿ.31ರವರೆಗಿನ ಅವಧಿಯಲ್ಲಿ ಸಾಧನೆ ಮಾಡಿದ ಅಂಗವಿಕಲ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ.

ಅರ್ಹರು ಸಾಧನೆಗೆ ಸಂಬಂಧಿಸಿದಂತೆ ಪದಕ, ಕ್ರೀಡಾ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನಕಲು ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕಿನ ಶಾಖೆ, ಐಎಫ್‌ಎಸ್‌ಸಿ ಕೋಡ್‌ನೊಂದಿಗೆ ಲಿಖಿತ ಅರ್ಜಿಯನ್ನು ಜ.20ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ಕಚೇರಿಗೆ ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net