

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ದಸರಾ ಉದ್ಘಾಟ ಕರಾದ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಬುಧವಾರ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶಾಲು ಹೊದಿಸಿ, ಹಾರ ಹಾಕಿ, ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಗಮಿಸು ವಂತೆ ಕೋರಿಕೊಂಡರು. ನಂತರ ಹಂಸಲೇಖ ಅವರ ನಿವಾಸಕ್ಕೆ ತೆರಳಿ ದಸರಾ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಕೋರಿಕೊಳ್ಳ ಲಾಯಿತು.
ಈ ಸಂದರ್ಭ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಇತರರು ಇದ್ದರು.