

ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮುಂಗಡ ಪತ್ರದ ಪೂರ್ವಭಾವಿ ಸಭೆಗಾಗಿ ಜಿಎಸ್‌ಟಿ, ವಾಣಿಜ್ಯ ತೆರಿಗೆ, ವೃತ್ತಿ ತೆರಿಗೆ, ಆದಾಯ ತೆರಿಗೆ, ಎಪಿಎಂಸಿ, ಕಾರ್ಮಿಕ ವಿಷಯಗಳು, ಸ್ವಯಂ ಘೋಷಿತ ಆಸ್ತಿ ತೆರಿಗೆ, ನಗರಾಭಿವೃದ್ಧಿ, ರೈಲ್ವೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದ ಮತ್ತು ಗದಗ ಜಿಲ್ಲೆಯ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯಗಳು, ಕೈಗಾರಿಕೋದ್ಯಮಿಗಳ ಸಮಸ್ಯೆಗಳ ವಿಷಯವಾಗಿ ಸಂಸ್ಥೆಯಿಂದ ಬೇಡಿಕೆಗಳ ಪಟ್ಟಿ ತಯಾರಿಸಲಾಗುವುದು. ಸಂಸ್ಥೆಯ ಸದಸ್ಯರು ಹಾಗೂ ವ್ಯಾಪಾರಸ್ಥರು ಮತ್ತು ವಾಣಿಜ್ಯೋದ್ಯಮಿಗಳು, ಸಂಘ-ಸಂಸ್ಥೆಗಳು ಈ ವಿಷಯಗಳ ಬಗ್ಗೆ ಸಲಹೆ, ಸೂಚನೆಗಳನ್ನು ಲಿಖಿತ ರೂಪದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಗೆ ನ. 10ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.