

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ವಿಷಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಾಡಿದ್ದೇನು ಎಂಬುದರ ಬಗ್ಗೆ ಸಂಸದ ರಮೇಶ ಜಿಗಜಿಣಗಿ ಬಹಿರಂಗ ಚರ್ಚೆಗೆ ಆಹ್ವಾನಿಸಿದರು.
ಸಿದ್ದರಾಮಯ್ಯ ದಲಿತ ವಿರೋಧಿ ಎಂಬ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಶಾಸಕ ರಾಜು ಆಲಗೂರ ನೀಡಿದ ಪ್ರತಿಕ್ರಿಯೆಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮತ್ತೆ ಟಾಂಗ್ ನೀಡಿದ ಜಿಗಜಿಣಗಿ, ಡಾ.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಎಷ್ಟು ಕೆಟ್ಟದಾಗಿ ನಡೆಸಿಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇನ್ನು ಬಿಜೆಪಿ ಡಾ.ಅಂಬೇಡ್ಕರ್ ಅವರ ಪುಣ್ಯಸ್ಥಳಗಳನ್ನು ಅಭಿವೃದ್ಧಿ ಪಡಿಸಿರುವುದ ಸಹ ಜಗಜ್ಜಾಹೀರು. ಈ ಬಗ್ಗೆ ಚರ್ಚೆಯಾಗಲಿ ಎಂದರು.
ಕಾಂಗ್ರೆಸ್ ಪಕ್ಷ ಡಾ.ಅಂಬೇಡ್ಕರ್ ವಿರೋಧಿ ಹಾಗೂ ದಲಿತ ವಿರೋಧಿ ಎಂಬ ಕಾರಣಕ್ಕಾಗಿಯೇ ಈ ಹಿಂದೆ ಆ ಪಕ್ಷದಿಂದ ಬಂದ ಆಹ್ವಾನ ತಿರಸ್ಕರಿಸಿದ್ದೇನೆ. ಬಾಬಾಸಹೇಬರನ್ನೇ ಬಿಡದವರು ಇನ್ನು ನಮ್ಮನ್ನು ಬಿಡುತ್ತಾರೆಯೇ ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿ ಬಿಜೆಪಿಗೆ ಸೇರ್ಪಡೆಯಾಗಿರುವುದೆಂದರು.