ಕವಿಗೋಷ್ಠಿಗೆ ಕವನಗಳ ಆಹ್ವಾನ

Invitation to poetry for poetry recitals
Published on

ಮಡಿಕೇರಿ:

ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿ ಅ. 11ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಸÀರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುವ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಗೋಣಿಕೊಪ್ಪಲು ಬಹುಭಾಷಾ ಕವಿಗೋಷ್ಠಿ ಆಯೋಜನಾ ಸಮಿತಿಯ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಂಚಾಲಕರಾಗಿ ಎಸ್.ಎಂ. ರಜನಿ, ಕಾರ್ಯದರ್ಶಿಯಾಗಿ ಶೀಲಾ ಬೋಪಣ್ಣ, ಸಹಕಾರ್ಯದರ್ಶಿಯಾಗಿ ಟಿ.ಅರ್ ವಿನೋದ್, ನಿರ್ದೇಶಕರಾಗಿ ಚಂದನಾ ಮಂಜುನಾಥ್, ಓಮನ, ಉಳುವಂಗಡ ಕಾವೇರಿ, ಶ್ರೀ ಕಾವೇರಿ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸಂಯೋಜಕ ಎಂ.ಕೆ.ಚAದನ್ ಕಾಮತ್, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ರವರನ್ನು ಆರಿಸಲಾಯಿತು.
ಈ ಕವಿಗೋಷ್ಠಿಗೆ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆ. 28 ರಒಳಗಾಗಿ ಕಳುಹಿಸಿಕೊಡಬೇಕು. ಈ ಬಾರಿಯ ಕವಿಗೋಷ್ಠಿಯಲ್ಲಿ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ಕನ್ನಡ ಲಿಪಿಯಲ್ಲಿ ಹಾಗೂ ಹಿಂದಿ, ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡಬೇಕು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು.
ಈ ಬಾರಿ ವಿಶೇಷವಾಗಿ ಮಕ್ಕಳ ಕವನ(6 ರಿಂದ 13 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.

ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಕವನಗಳನ್ನು ಮತ್ತು ಮಾಹಿತಿಯನ್ನು ವ್ಯಾಟ್ಸಾಪ್, ಇ.ಮೇಲ್ ಮೂಲಕ ಕಳುಹಿಸಬಹುದು. ಕವನಗಳನ್ನು ಟೈಪ್ ಮಾಡಿ ಕಳುಹಿಸಬೇಕು. ಅಂಚೆ ಮೂಲಕ ಕಳುಹಿಸುವವರು
ಅಧ್ಯಕ್ಷರು, ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ಕಾಮತ್ ನವಮಿ, ಗೋಣಿಕೊಪ್ಪಲು.-571213 ವಿಳಾಸಕ್ಕೆ ಕಳಿಸಬಹುದು. ಹೆಚ್ಚಿನ ಮಾಹಿತಿಗೆ ಸಮಿತಿಯ ಸಂಚಾಲಕಿ ಎಸ್.ಎಂ, ರಜನಿ -94838 26120, ಶೀಲಾ ಬೋಪಣ್ಣ- 9945794414
ಚಂದನಾ ಮಂಜುನಾಥ್ 9986939357 ಅವರನ್ನು ಸಂಪರ್ಕಿಸಬಹುದು.

ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷಾ ಕವಿಗೋಷ್ಠಿಯಂದು ಅವಕಾಶ ಒದಗಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟೆ ವಾಚಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net