ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ಕೋಡಿಮಠದ ಶ್ರೀಗೆ ಆಹ್ವಾನ

dr.shivananda shivayogi swamiji
ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
Published on

ಅರಸೀಕೆರೆ: ಅಯೋಧ್ಯೆಯಲ್ಲಿ ಜ.22ರಂದು ಜರುಗುವ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆಗೆ ತಾಲೂಕಿನ ಸುಕ್ಷೇತ್ರ ಕೋಡಿಮಠದ ಪೀಠಾಧ್ಯಕ್ಷ ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಭಿಜಿನ್ ಮಹೂರ್ತದಲ್ಲಿ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ. ಇಂತಹ ಪುಣ್ಯ ಹಾಗೂ ಐತಿಹಾಸಿಕ ಧಾರ್ಮಿಕ ಕೈಂಕರ್ಯದಲ್ಲಿ ಪಾಲ್ಗೊಳ್ಳಲು ಜ.21ರಂದೇ ಆಗಮಿಸಬೇಕು ಎಂದು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ವಿನಂತಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net