ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಆಮಂತ್ರಣ

Bdk_Swamiji
Published on

ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ವತಿಯಿಂದ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಮಾ.1ರಿಂದ 9ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆದುಕೊಳ್ಳಲಾಯಿತು.

ಕಿಳಿಂಗಾರು ಸಾಯಿಮಂದಿರದಲ್ಲಿ ಮೊಕ್ಕಾಂ ಹೂಡಿದ್ದ ಶ್ರೀಗಳ ಭೇಟಿಯ ಸಂದರ್ಭ ಕಾರ್ಮಾರು ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕ್ಕುಂಜ, ಸೇವಾಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ಗಣೇಶ್ ಪಟ್ಟಾಜೆ ಉಪಸ್ಥಿತರಿದ್ದರು. ಶ್ರೀದೇವರ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿ ಎಂದು ಶ್ರೀಗಳು ಹಾರೈಸಿ, ಮಂತ್ರಾಕ್ಷತೆಯನ್ನಿತ್ತರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net