ಸರ್ಕಾರಿ ಕಾರ್ಯಕ್ರಮಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರನ್ನು ಆಹ್ವಾನಿಸಿ

kdr4 (1)
Published on

ಕಡೂರು: ಸ್ಥಳೀಯವಾಗಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರನ್ನು ಕಡ್ಡಾಯವಾಗಿ ಆಹ್ವಾನಿಸ ಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಟಿ.ಕಲ್ಲೇಶ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ ಮತ್ತು ಕೆಎಸ್‌ಆರ್‌ಟಿಸಿಯಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು. ಈ ಬಗ್ಗೆ ಅನೇಕ ಬಾರಿ ಸೂಚನೆ ನೀಡಲಾಗಿದೆ. ಬಹಳಷ್ಟು ಕಡೆ ಲೈನ್‌ಮಾನ್‌ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳು ಸದಸ್ಯರಿಂದ ಕೇಳಿ ಬರುತ್ತಿವೆ. ಅಂತಹ ಲೈನ್‌ಮನ್‌ಗಳನ್ನು ಬದಲಿಸಬೇಕು ಎಂದರು.

ಸಮಿತಿ ಸದಸ್ಯ ಸಪ್ತಕೋಟಿ ಧನಂಜಯ್ ಮಾತನಾಡಿ, ಸರ್ಕಾರ ಬಡ ಕುಟುಂಬಗಳ ಮನೆಗಳಿಗೆ ಉಚಿತ ಕರೆಂಟ್ ಎಂದು ಹೇಳುತ್ತಾರೆ. ಆದರೆ ಮೆಸ್ಕಾಂನವರು ಪದೇ ಪದೇ ವಿದ್ಯುತ್ ಕಡಿತಗೊಳಿಸುತ್ತಾರೆ. ಇದು ನೀವು ಉಚಿತ ಕರಂಟ್ ಕೊಡುವ ರೀತಿ ಎಂದು ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ನಮಗೆ ಮುಜುಗರವಾಗುತ್ತಿದೆ. ಈ ಸಮಸ್ಯೆಗೆ ಮೆಸ್ಕಾಂನವರು ಪರಿಹಾರ ಸೂಚಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net