ಕುಸ್ತಿಪಟುಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

6-Gdg-15
ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಜರುಗಿದ ಬಯಲು ಕುಸ್ತಿಯ ಫೈನಲ್ ಪಂದ್ಯದಲ್ಲಿ ಸೆಣಸಿದ ಪೈಲ್ವಾನ್ ಪುಟ್ಟಪ್ಪ ಹಾಗೂ ಸುರೇಶ.
Published on

ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕುಸ್ತಿಪಟುಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸುಮಾರು 20 ರಿಂದ 50 ವಯೋಮಿತಿ ಹೊಂದಿರುವ ಕುಸ್ತಿ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿತ ನಮೂನೆ ಯೊಂದಿಗೆ ಜಾತಿ ಪ್ರಮಾಣ ಪತ್ರ, ವಾರ್ಷಿಕ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಪ್ರಶಸ್ತಿ ಪತ್ರಿಗಳು, ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಭಾವಚಿತ್ರಗಳು, ಪ್ರಮಾಣ ಪತ್ರ ಹಾಗೂ ಇನ್ನಿತರ ದಾಖಲಾತಿಗಳೊಂದಿಗೆ ದೃಢೀಕರಿಸಿ ಆಗಸ್ಟ್ 31 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕೆಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net