ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಿ

9KMD-1
Published on

ಕೆ.ಎಂ.ದೊಡ್ಡಿ: ಮಕ್ಕಳು ಕಲಿಕೆ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಪಾಲಕರು ಪ್ರೋತ್ಸಾಹಿಸಬೇಕು ಎಂದು ಅಂತಾರಾಷ್ಟ್ರೀಯ ಚೆಸ್ ಕ್ರೀಡಾಪಟು ಎನ್.ಮಾಧುರಿ ತಿಳಿಸಿದರು.

ಇಲ್ಲಿನ ಭಾರತೀ ಸ್ಕೂಲ್ ಆಫ್ ಎಕ್ಸ್‌ಲೆನ್ಸ್ ವತಿಯಿಂದ ಶಾಲಾ ವಾರ್ಷಿಕೋತ್ಸವ ಅಂಗವಾಗಿ ಭಾನುವಾರ ಆಯೋಜಿಸಿದ್ದ ಗ್ಲೋರಿಫ್ಯ್-2020 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಕಲಿಕೆ ಎಂಬಒತ್ತಡಕ್ಕೆ ಸಿಲುಕಿಸಿದೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಇಟಿ ಟ್ರಸ್ಟಿ ಮಧು ಜಿ.ಮಾದೇಗೌಡ, ಎಲ್ಲ ಮಕ್ಕಳ ಬುದ್ಧಿಶಕ್ತಿ ಸಮಾನವಾಗಿರುತ್ತದೆ. ಆದರೆ ಶಿಕ್ಷಕರು ಹಾಗೂ ಪಾಲಕರು ಅವರ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಒದಗಿಸಬೇಕು ಎಂದರು.

ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಿಇಟಿ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಬಹುಮಾನ ವಿತರಿಸಿದರು.ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಮಸಿಮಿಲ್ಯ್‌ನ್ ಪಬ್ಲಿಷರ್‌ನ ಶಾಖಾ ವ್ಯವಸ್ಥಾಪಕ ಕಿರಣ್‌ಕುಮಾರ್, ಭಾರತೀ ಸ್ಕೂಲ್ ಆಫ್ ಅಕಾಡೆಮಿಯ ಪ್ರಾಂಶುಪಾಲ ಸಿ.ವಿ.ಮಲ್ಲಿಕಾರ್ಜುನ, ಎಕ್ಸ್‌ಲೆನ್ಸ್‌ನ ಆಡಳಿತಾಧಿಕಾರಿ ಎಂ.ಮಾಯಪ್ಪ, ಮುಖ್ಯ ಶಿಕ್ಷಕಿಯರಾದ ಎಚ್.ಪಿ.ಪ್ರತಿಮಾ, ಶ್ವೇತಾ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net