ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಇಬ್ಬರ ಬಂಧನ

Screenshot_2020-11-07-11-04-09-1313057826
Published on

ಶಿವಮೊಗ್ಗ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡಗಳ ನಡುವಿನ ಐಪಿಎಲ್ ನ ೨ನೇ ಎಲಿಮಿನೇಟರ್ ಕ್ರಿಕೆಟ್ ಪಂದ್ಯ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿದ್ದು 40 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಮಲವಗೊಪ್ಪದ ಮಹ್ಮದ ಮಸೂದ್ (43), ಜೆಪಿ ನಗರದ
ಶೇಖರ್ (26) ಬಂಧಿತರು. ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ಆರೋಪಿಗಳು ಐಪಿಎಲ್‍ ಕ್ರಿಕೆಟ್‍ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದೆ. ಬಂಧಿತರಿಂದ 2 ಮೊಬೈಲ್ ಪೋನ್‍ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net