ಸ್ವಯಂ ನಿವೃತ್ತಿಗೆ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ: ರಾಜಕೀಯ ಪ್ರವೇಶ ಸಾಧ್ಯತೆ..?

djhfghjsdgfusf sdfsdfsdgf
Published on

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ರೈಲ್ವೇ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್ ಮತ್ತು ಸರ್ಕಾರಕ್ಕೆ ಪತ್ರ ಬರೆದು ಭಾಸ್ಕರ್ ರಾವ್ ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 2020ರ ಜುಲೈನಲ್ಲಿ ಅವರನ್ನು ಸರ್ಕಾರದ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಗೆ ವಗಾವಣೆ ಮಾಡಿತ್ತು.

1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರ ಸೇವಾ ಅವಧಿ ಪೂರ್ಣಗೊಳ್ಳಲು ಇನ್ನೂ ಮೂರು ವರ್ಷ ಬಾಕಿಯಿದೆ. ಹೀಗಿದ್ದರೂ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದು ಯಾಕೆ ಎಂಬ ಎಂಬ ಹಲವು ಪ್ರಶ್ನೆ ಮೂಡಿದೆ.

ರಾಜಕೀಯ ಎಂಟ್ರಿ ಸಾಧ್ಯತೆ..?

ಭಾಸ್ಕರ್‌ ರಾವ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಸವನಗುಡಿ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ರಾವ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net