ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದ್ರೋಣ ತರಬೇತಿ

Dron
Published on

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಮುಖ್ಯ ಪರೀಕ್ಷೆಗೆ ಆಯ್ಕೆಯಾದ 50 ಬಡ ಅಭ್ಯರ್ಥಿಗಳಿಗೆ
ಹಿರಿಯ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳಿಂದ ಉಚಿತ (ದ್ರೋಣ ಕೋರ್ಸ್) ತರಬೇತಿ ನೀಡಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣವರ ಮಾರ್ಗದರ್ಶನದಲ್ಲಿ ಧಾರವಾಡ ಮತ್ತು ಬೆಂಗಳೂರಿನಲ್ಲಿ ಆನ್‌ಲೈನ್ ಮೂಲಕ ತರಬೇತಿ ನಡೆಯಲಿದೆ. ಕೆ.ಎ.ಎಸ್ ಮುಖ್ಯ ಪರೀಕ್ಷೆಗಾಗಿ ಪ್ರತಿ ಭಾನುವಾರ ವಿಭಾಗವಾರು ಒಂದು ಮಾದರಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.

ತಲಾ ಓರ್ವ ಅಧಿಕಾರಿ ಓರ್ವ ಅಭ್ಯರ್ಥಿಗೆೆ ಮಾರ್ಗದರ್ಶನ ನೀಡಲಿದ್ದಾರೆ. ಒಟ್ಟು 20 ಪರೀಕ್ಷೆ ನಡೆಸಿ ಮಾರ್ಗದರ್ಶನ ನೀಡಲಾಗುವುದು. ಕೆಎಎಸ್ ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಹೆಸರು ನೊಂದಾಯಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9606303707 /9606303202 (ಬೆಂಗಳೂರು), 8296535206, 8296534933 ಸಂಪರ್ಕಿಸಬಹುದು ಎಂದು ಡಾ.ತ್ರೀವೇಣಿ ಚೆನ್ನಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net