

ಮಂಗಳೂರು: ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಆಟಿದ ಕೂಟ ಕಾರ್ಯಕ್ರಮ ಇರಾ ಬಂಟರ ಭವನದಲ್ಲಿ ಭಾನುವಾರ ನಡೆಯಿತು.
ಸೈಂಟ್ ಆ್ಯಗ್ನೆಸ್ ಕಾಲೇಜಿನ ಪ್ರಾಧ್ಯಾಪಕ ಅರುಣ್ ಉಳ್ಳಾಲ್ ಅವರು ಮಾತನಾಡಿ, ತುಳು ಸಂಸ್ಕೃತಿಯ ಆಚಾರ ವಿಚಾರಗಳು ವೈಜ್ಞಾನಿಕವಾಗಿಯೂ ಮಹತ್ವವನ್ನು ಪಡೆದಿದೆ. ತುಳುನಾಡಿನ ಶ್ರೀಮಂತವಾದ ಸಂಸ್ಕೃತಿ ಸಂಸ್ಕಾರವನ್ನು ಕಾಪಾಡಿಕೊಂಡು ಬರುವ ಮಹತ್ತರ ಜವಾಬ್ದಾರಿ ನಮ್ಮ ಮುಂದಿದೆ ಎಂದರು.
ಕಟೀಲು ಮೇಳದ ಸಂಚಾಲಕರು, ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಯುವಕ ಮಂಡಲ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಪಿ.ಎಂ ಕೊಡಂಗೆ, ಪ್ರಧಾನ ಸಂಚಾಲಕ ಜಗದೀಶ್ ಶೆಟ್ಟಿ ಇರಾಗುತ್ತು, ಅಧ್ಯಕ್ಷ ಜಯರಾಮ್ ಪೂಜಾರಿ ಸೂತ್ರಬೈಲು, ಕಾರ್ಯದರ್ಶಿ ಸುರೇಶ್ ರೈ ಪರ್ಲಡ್ಕ, ಯುವಕ ಮಂಡಲದ ಅಧ್ಯಕ್ಷ ಗಣೇಶ್ ಎಸ್.ಅತ್ತಾವರ, ಕಾರ್ಯದರ್ಶಿ ಜಯರಾಜ್ ಶೆಟ್ಟಿ ಕುಂಡಾವು ಉಪಸ್ಥಿತರಿದ್ದರು.
ಸಂಘದ ಹಿರಿಯ ಸದಸ್ಯ ಸುರೇಶ್ ಕೊಟ್ಟಾರಿ ನಿರೂಪಿಸಿದರು. ಪುಷ್ಪರಾಜ ಕುಕ್ಕಾಜೆ ಸ್ವಾಗತಿಸಿದರು. ವೈ.ಬಿ ಸುಂದರ್ ಹಾಗೂ ಯತಿರಾಜ್ ಶೆಟ್ಟಿ ಸಂಪಿಲ ವಂದಿಸಿದರು.