

ಬೆಳಗಾವಿ: ನಗರ ಸೇರಿ ರಾಜ್ಯಾದ್ಯಂತ ನಿರಂತರ ಮಳೆ, ನದಿಗಳ ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿರುವ ರೈತರು, ಕೂಲಿ ಕಾರ್ಮಿಕರ, ಜನಸಾಮಾನ್ಯರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿ ಹಿಂದೆ ಬಿದ್ದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ನದಿಗಳ ಪ್ರವಾಹ, ಮಳೆಯಿಂದ ಅಂದಾಜು 60 ಸಾವಿರ ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಆದರೆ, ಜಿಲ್ಲೆಯ ಸಚಿವರು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂ, ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲೆ ನಿರತರಾಗಿದ್ದು, ಪ್ರವಾಹಪೀಡಿತ ಸ್ಥಳಕ್ಕೆ ಹೋಗಿ ಜನರ ಸಂಕಷ್ಟ ಆಲಿಸುತ್ತಿಲ್ಲ. ಚುನಾವಣೆ ಕಿಮಿಕ್ಗಾಗಿ ಆಯಾ ಕ್ಷೇತ್ರಗಳು, ಪಿಕೆಪಿಎಸ್ಗಳಿಗೆ ಅನುದಾನ ನೀಡಿದ್ದಾರೆ ಎಂದು ದೂರಿದರು.
ರೈತರು ಅಗ್ಗದ ದರದಲ್ಲಿ ಕೃಷಿ ಉತ್ಪನ್ನಗಳನ್ನು ಮಾರುವ ದುಸ್ಥಿತಿ ಬಂದಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.
ಎನ್ಡಿಆರ್ಎಫ್ ನಿಯಮದ ಪ್ರಕಾರ ಸಂಪೂರ್ಣ ಹಾನಿಗೊಳಗಾದ ಮನೆಗೆ 1 ಲಕ್ಷ ರೂ., ಭಾಗಶ@ ಹಾನಿಯಾಗಿರುವ ಮನೆಗಳಿಗೆ 40 ಸಾವಿರ ರೂ. ಪರಿಹಾರ ನೀಡಬೇಕಿತ್ತು. ಆದರೆ, ಇಲ್ಲಿಯವರೆಗೆ ಪರಿಹಾರ ನೀಡಿಲ್ಲ ಎಂದು ದೂರಿದರು.
ಶಾಸಕ ಅಭಯ ಪಾಟೀಲ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣ 5 ಲ ರೂ.ಪರಿಹಾರ ಕೊಟ್ಟಿದ್ದೆವು. ಈಗಿನ ಕಾಂಗ್ರೆಸ್ ಸರ್ಕಾರ ಕಡಿಮೆ ಪರಿಹಾರ ೂಷಿಸಿದೆ. ಅದನ್ನೂ ಕೊಟ್ಟಿಲ್ಲ. ಮನೆ ಕಳೆದುಕೊಂಡವರ ಬದುಕು ಬೀದಿಗೆ ಬಂದಿದೆ ಎಂದರು.
ಮಾಜಿ ಶಾಸಕ ಅನಿಲ ಬೆನಕೆ, ಸಂಜಯ ಪಾಟೀಲ, ಪಾಲಿಕೆ ಸದಸ್ಯರಾದ ಹಣಮಂತ ಕೊಂಗಾಲಿ, ರಾಜಶೇಖರ ಡೋಣಿ, ಬಿಜೆಪಿ ನಗರ ಟಕ ಅಧ್ಯೆ ಗೀತಾ ಸುತಾರ ಇತರರಿದ್ದರು.