ಅನಿಯಮಿತ ವಿದ್ಯುತ್ ಕಡಿತ

POWER CUT
Published on

ನರಗುಂದ: ಪ್ರಸಕ್ತ ವರ್ಷ ರಾಜ್ಯಾದ್ಯಂತ ಮುಂಗಾರು ಮಳೆಯ ಕೊರತೆ ಉಂಟಾಗಿರುವುದರಿಂದ ಸೌರ, ಪವನ, ಜಲ ವಿದ್ಯುತ್ ಉತ್ಪಾದನೆಯೂ ಕುಂಠಿತಗೊಂಡಿದೆ. ಆದರೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯಿಂದ ತಾತ್ಕಾಲಿಕವಾಗಿ ಬೇಡಿಕೆ ಹಾಗೂ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಪರಿಣಾಮ ನರಗುಂದ, ರೋಣ, ಗಜೇಂದ್ರಗಡ ತಾಲೂಕಿನ ವ್ಯಾಪ್ತಿಗೊಳಪಡುವ ರೈತರ ಪಂಪ್‌ಸೆಟ್‌ಗಳಿಗೆ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಎಂ. ಖುದಾವಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net