ಮೈಸೂರು ವಿಶ್ವ ವಿದ್ಯಾಲಯದಲ್ಲಿ ಅಕ್ರಮ : ಕೆ. ಮಹದೇವ್‌ರಿಂದ ಲೋಕಾಯುಕ್ತಗೆ ದೂರು

mysore university
Published on

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗಕ್ಕೆ ಪ್ರಧಾನ ವಿಜ್ಞಾನಿಯಾಗಿ ನೇಮಕಗೊಂಡ ಡಾ. ಚಂದ್ರನಾಯಕ್ ಅವರ ಆಡಳಿತಾವಧಿಯಲ್ಲಿ ಹಲವಾರು ಅಕ್ರಮಗಳು ನಡೆದಿದ್ದು, ಈ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಪತ್ರ ಬರೆಯಲಾಗಿದೆ ಎಂದು ಮೈಸೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಕೆ. ಮಹದೇವ್ ಹೇಳಿದರು.

ಚಂದ್ರನಾಯಕ್ ಪ್ರಸ್ತುತ ಮೈಸೂರು ವಿಶ್ವ ವಿದ್ಯಾಲಯದ ವಿಜ್ಞಾನ ಭವನ ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್‌ನ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾತ್ಕಾಲಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ 100 ಕೋಟಿ ರೂ.ಗಿಂತ ಹೆಚ್ಚಿನ ವಹಿವಾಟನ್ನು ನಡೆಸಿದ್ದಾರೆ. ತಾತ್ಕಾಲಿಕ ಹುದ್ದೆಯಲ್ಲಿರುವ ವ್ಯಕ್ತಿಗೆ ಇಷ್ಟೊಂದು ದೊಡ್ಡ ಮೊತ್ತದ ವಹಿವಾಟು ನಡೆಸಲು ಅಧಿಕಾರ ನೀಡಿದವರು ಯಾರು? ಇದರ ಹಿಂದೆ ವಿಶ್ವ ವಿದ್ಯಾಲಯದ ಕುಲಪತಿ ಕೈವಾಡವಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮೈಸೂರು ವಿಶ್ವ ವಿದ್ಯಾಲಯವು 1,200 ವಿದ್ಯಾರ್ಥಿಗಳ ದಾಖಲಾತಿ ತಯಾರಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ವಹಿಸಲಾಗಿತ್ತು. ಆದರೆ, ಕೆಲಸ ಪೂರ್ಣಗೊಳ್ಳದೆ ಇದ್ದರೂ ವಿವಿಯು ಖಾಸಗಿ ಸಂಸ್ಥೆಗೆ ಕೆಲಸ ಪೂರ್ಣಗೊಂಡ ಪ್ರಮಾಣ ಪತ್ರ ನೀಡಿ 1.88 ಕೋಟಿ ರೂ ಹಣ ಬಿಡುಗಡೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವ ಅವಶ್ಯಕತೆ ಇದೆ ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net