ಏತ ನೀರಾವರಿಯಿಂದ ರೈತರಿಗೆ ಅನುಕೂಲ - ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹೇಳಿಕೆ

24 KAMPLI 01
ಕಂಪ್ಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ಶುಕ್ರವಾರ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆ ನೆರವೇರಿಸಿದರು. ಪ್ರಮುಖರಾದ ಇಟಗಿ ಸಣ್ಣಬಾಲೇಸಾಬ್, ಷಾಮಿಯಾನ ವೀರೇಶ್, ವಡ್ಡರ ಶಂಕರ್, ದಾದಾ ಖಲಂದರ್ ಇತರರಿದ್ದರು.
Published on

ಕಂಪ್ಲಿ : ಏತ ನೀರಾವರಿಯಿಂದ ತಾಲೂಕಿನ ಕೆಡೆ ಅಂಚಿನ ಭೂಮಿಗೆ ನೀರು ದೊರೆಯಲಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ 4.79 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಶುಕ್ರವಾರ ಮಾತನಾಡಿದರು.

ಕಳ್ಳಿ ಹೊಲ ರಸ್ತೆ ಅಭಿವೃದ್ಧಿಗೆ 12.50ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಮೇಲ್ದರ್ಜೆಗೇರಿಸಿ ಸಿಸಿ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು. ಮುಂದಿನ ಅವಧಿಯಲ್ಲಿ ಇಟಗಿ, ಸಣಾಪುರ ಮೊದಲಾದ ಗ್ರಾಮಗಳ ಕಡೆ ಅಂಚಿನ ಭೂಮಿಗಳಿಗೆ ಏತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಮನೆ ಮನೆಗೆ ಶುದ್ಧ ಕುಡಿವ ನೀರು ಸೇರಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಬಹು ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಈರಮ್ಮ, ಪ್ರಮುಖರಾದ ಸಣ್ಣ ಬಾಲೇಸಾಬ್, ಷಾಮಿಯಾನ ವೀರೇಶ್, ವಡ್ಡರ ಶಂಕರ್, ದಾದಾ ಖಲಂದರ್, ಭಾಸ್ಕರರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net