ನೀರಾವರಿ ಯೋಜನೆಗಳಿಗೆ ಅನುದಾನ ನೀಡಿ

0101010101
Published on

ಬೆಳಗಾವಿ: ಮೇಕೆದಾಟು ಯೋಜನೆ, ಕೃಷ್ಣಾ ನದಿ ನೀರು ಹಂಚಿಕೆ, ಕಳಸಾ ಬಂಡೂರಿ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸುವಂತೆ ಹಾಗೂ ನಾರಾಯಣಪುರ ಎಡದಂಡೆ ಕಾಲುವೆಗೆ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಸಚಿವರು, ಆಲಮಟ್ಟಿ ಅಣೆಕಟ್ಟೆ ಎತ್ತರಿಸಲೂ ಸಹ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುಂತೆ ಮನವಿ ಸಲ್ಲಿಸಿದರು.

ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗೆ 2020-21ನೇ ಸಾಲಿನಲ್ಲಿ ಕೇಂದ್ರದ ನೆರವಿನ ಪಾಲಿನ 218.97 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೆ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವಂತೆ ಸಚಿವ ಜಾರಕಿಹೊಳಿ ಒತ್ತಾಯಿಸಿದರು.
ರಾಜ್ಯ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೈಪ್ರಕಾಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net