

ಅರಸೀಕೆರೆ ಗ್ರಾಮಾಂತರ: ಪಟ್ಟಣದ ಹೊರ ವಲಯದ ಜೇನುಕಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕೋಳಗುಂದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸಿಂಚನಾ 3000, 800 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ವೈಯಕ್ತಿಕ ವಿಭಾಗದಲ್ಲಿ ವೀರಾಗ್ರಣಿ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
1500 ಮೀ. ಪಲ್ಲವಿ ದ್ವಿತೀಯ, ಎತ್ತರ ಜಿಗಿತ ಪೂಜಾ ತೃತೀಯ ಹಾಗೂ ಜಾವಲಿನ್‌ನಲ್ಲಿ ನಮಿತಾ ತೃತೀಯ ಪ್ರಶಸ್ತಿ ಪಡೆದಿದ್ದಾರೆ. ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸ್ಥಳೀಯ ಕೇದಿಗೆ ಮಠದ ಶ್ರೀ ಜಯಚಂದ್ರ ಶೇಖರ ಸ್ವಾಮೀಜಿ ಅಭಿನಂದಿಸಿದರು.
ಮಕ್ಕಳು ಪಠ್ಯಪುಸ್ತಕಗಳನ್ನು ಅಭ್ಯಾಸ ಮಾಡುವುದರ ಜತೆಗೆ ಆಟೋಟಗಳಲ್ಲೂ ಪಾಲ್ಗೊಳ್ಳಬೇಕು ಎಂದು ಜಯಚಂದ್ರ ಶೇಖರ ಸ್ವಾಮೀಜಿ ಹೇಳಿದರು.
ಶಾಲೆ ಮುಖ್ಯ ಶಿಕ್ಷಕ ಎಂ.ಎಸ್.ಪಂಚಾಕ್ಷರಿ, ದೈಹಿಕ ಶಿಕ್ಷಕ ಪ್ರಸನ್ನಕುಮಾರ್ ಇದ್ದರು.