ಭಾರತ ತಂಡ ಪ್ರತಿನಿಧಿಸಿದ ಇರ್ಷಾದ್

ಭಾರತ ತಂಡ ಪ್ರತಿನಿಧಿಸಿದ ಇರ್ಷಾದ್
Published on

ಸುಂಟಿಕೊಪ್ಪ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಏಷ್ಯಾ ಸೆಸ್ಟೋಬಾಲ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಇರ್ಷಾದ್ ಮುಸ್ತಫಾ ಭಾರತ ತಂಡವನ್ನು ಪ್ರತಿನಿಧಿಸುವ ಮೂಲಕ ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡಿದರು.

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಶ್ರೀಲಂಕಾ ತಂಡವನ್ನು ಮಣಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ. ಇರ್ಷಾದ್ ಮುಸ್ತಫಾ ದಿ. ಜಾವಮನೆ ಮುಸ್ತಾಫ, ಹರಿಮತ್ ಅವರ ಪುತ್ರರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net