ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ

15062022 sirwar congress programe
Published on

ಸಿರವಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಎನ್. ಹೇಳಿದರು.

ಪಟ್ಟಣದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಬುಧವಾರ ಆಯೋಜಿಸಿದ್ದ ನಾ ನಾಯಕಿ-ನಾರಿಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿರಾಗಾಂಧಿ, ಸೋನಿಯಾ ಗಾಂಧಿಯಂತಹ ಧೀಮಂತ ನಾಯಕರು ಪಕ್ಷವನ್ನು ಮುನ್ನಡಿಸಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ದೇಶದ ಇತಿಹಾಸದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ನೀಡಿರುವ ಹೆಗ್ಗಳಿಗೆ ಕಾಂಗ್ರೆಸ್‌ನದಾಗಿದೆ ಎಂದರು.

ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆಯರು, ಪುರುಷರಿಗೆ ಕಡಿಮೆ ಇಲ್ಲ ಎಂಬುದನ್ನು ಬೂತ್ ಮಟ್ಟದಲ್ಲಿ ಸಂಘಟನೆ ಮಾಡುವುದರ ಮೂಲಕ ತೋರಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಪ್ರಮುಖರಾದ ಶಿವಶರಣ ಸಾಹುಕಾರ್ ಅರಕೇರಿ, ಅನಿತಾ, ಚಂದ್ರಕಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net