ಇಷ್ಟಲಿಂಗ ಮಹಾಪೂಜೆ ಇಂದಿನಿಂದ

4 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಅಮ್ಮಿನಬಾವಿ ಗ್ರಾಮದ ಐತಿಹಾಸಿಕ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಶ್ರಾವಣ ಮಾಸ ನಿಮಿತ್ತ ಲೋಕ ಕಲ್ಯಾಣ ಮತ್ತು ವಿಶ್ವ ಶಾಂತಿ ಸಂಕಲ್ಪದೊಂದಿಗೆ ಶ್ರೀಮಠದ ಕಿರಿಯ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಂದ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಆ. 5ರಿಂದ ಸೆ. 1ರವರೆಗೆ ಜರುಗಲಿದೆ. ನಿತ್ಯ ಪ್ರಾತಃಕಾಲ 8 ಗಂಟೆಗೆ ಮಠದ ಪ್ರಾಂಗಣದಲ್ಲಿ ಆರಂಭಗೊಳ್ಳುವ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಭಕ್ತರು ಪಾಲ್ಗೊಳ್ಳಬಹುದು.
ಶ್ರೀಮಠದ ಕರ್ತೃ ಗದ್ದುಗೆಗೆ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿಗೆ ಪ್ರಾತಃಕಾಲದಲ್ಲಿ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿಯ ವಿಶೇಷ ಪೂಜಾ ಕೈಂಕರ್ಯಗಳು ಸೋಮಲಿಂಗಶಾಸ್ತ್ರಿ ಗುಡ್ಡದಮಠ, ಶಿವಯೋಗಿ ಹಿರೇಮಠ, ವಿನಾಯಕ ಹಿರೇಮಠ, ಈರಯ್ಯ ಹಿರೇಮಠ ಅವರಿಂದ ನಡೆಯಲಿವೆ ಎಂದು ಶ್ರೀಮಠದ ವ್ಯವಸ್ಥಾಪಕ ಶಿವಾನಂದಸ್ವಾಮಿ ಹಿರೇಮಠ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net