ಏ.2ರಂದು ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ

23 RPT 1
Published on

ರಿಪ್ಪನ್‌ಪೇಟೆ: ಸಮೀಪದ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿದುರ್ಗ ಸಂಸ್ಥಾನ ಮಠದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ಏ.2ರಂದು ಬೆಳಗ್ಗೆ 11.30ಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಇಷ್ಟಲಿಂಗ ಮಹಾ ಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ ಆಯೋಜಿಸಲಾಗಿದೆ ಎಂದು ಕವಲೇದುರ್ಗ ಮಠದ ಶ್ರೀ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ರಂಭಾಪುರಿ ಜಗದ್ಗುರುಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಮಳಲಿ ಮಠದ ಡಾ. ಶ್ರೀ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಜಗದ್ಗುರು ಶ್ರೀ ರೇಣುಕಾಚಾರ್ಯರ ಕುರಿತು ಹಿರಿಯ ಪತ್ರಕರ್ತ ಪ್ರಶಾಂತ್ ರಿಪ್ಪನ್‌ಪೇಟೆ ಉಪನ್ಯಾಸ ನೀಡಲಿದ್ದಾರೆ ಎಂದರು.
ಧರ್ಮಜಾಗೃತಿ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಸಾಲೂರು ಗ್ರಾಪಂ ಅಧ್ಯಕ್ಷೆ ಎಂ.ಸಿ.ಮಂಜುಳಾ, ಉಪಾಧ್ಯಕ್ಷ ಕೆ.ಎಚ್.ಜಾತಪ್ಪ, ಕೋಣಂದೂರಿನ ಲತಾ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net