ಕುಕ್ಕೆಯಲ್ಲಿ ಈಶ್ವರ್ ಖಂಡ್ರೆ ಆಶ್ಲೇಷ ಬಲಿ ಸೇವೆ : ಪುತ್ರ ಸಂಸದ ಸಾಗರ್ ಖಂಡ್ರೆ ತುಲಾಭಾರ

New Project
Published on

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಸೋಮವಾರ ರಾತ್ರಿ ಭೇಟಿ ನೀಡಿದರು. ಸಚಿವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ವತಿಯಿಂದ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡಿದ ಸಚಿವರು, ಮಂಗಳವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಆಶ್ಲೇಷ ಬಲಿ ಸೇವೆ ಸಮರ್ಪಿಸಿ ಬಳಿಕ ಹೊಸಳಿಗಮ್ಮನ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಈಶ್ವರ್ ಖಂಡ್ರೆ ಪುತ್ರ ಸಂಸದ ಸಾಗರ್ ಖಂಡ್ರೆ ತುಲಾಭಾರ ಸೇವೆ ನೆರವೇರಿಸಿದರು. ಕುಟುಂಬಸ್ಥರು ಜತೆಗಿದ್ದರು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭೇಟಿ ಮಾಡಿ ಸ್ವಾಗತಿಸಿದರು. ಕಾರ್ಯಕರ್ತರು ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net