ಬಾಹ್ಯಾಕಾಶ ರಂಗಕ್ಕೆ ಭಾರತದ ಕೊಡುಗೆ ಅಪಾರ

12ALR1 ISRO- 2
Published on

ಆಲೂರು : ಬಾಹ್ಯಾಕಾಶ ವಿಜ್ಞಾನಕ್ಕೆ ಭಾರತದ ಕೊಡುಗೆ ಅಪಾರ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಎ.ಎಸ್ ಕಿರಣ್ ಕುಮಾರ್ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬೆಂಗಳೂರಿನ ನೆಹರು ತಾರಾಲಯ ಸಂಸ್ಥೆಯಿಂದ ಭಾನುವಾರ ಆಯೋಜಿಸಿದ್ದ ವಿಜ್ಞಾನ ಮಾದರಿ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ತನ್ನ ವೈಜ್ಞಾನಿಕ ಕಠಿಣತೆ ಮತ್ತು ಸಾಮರ್ಥ್ಯದಿಂದ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ ಎಂದು ಬಾಹ್ಯಾಕಾಶ ಸಂಶೋಧನೆ ಸಂಸ್ಥೆ ಹಮ್ಮಿಕೊಂಡಿದ್ದ
ವಿಜ್ಞಾನ ಮತ್ತು ತಂತ್ರಜ್ಞಾನ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಕಲಿಕೆಯ ಸಂದರ್ಭದಲ್ಲಿ ಪ್ರತಿಯೊಂದು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು. ಆಧುನಿಕ ಜಗತ್ತಿಗೆ ಹೊಂದಿಕೊಳ್ಳುವ ರೀತಿ ಮಕ್ಕಳನ್ನು ಸದೃಢರನ್ನಾಗಿಸುವ ಉದ್ದೇಶದಿಂದ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಬೇಕು. ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ ಅಥವಾ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಶ್ರೀಮಂತ ಪರಂಪರೆ ಮತ್ತು ಇತಿಹಾಸ ಹೊಂದಿದೆ.
ಭಾರತೀಯ ಯುವಕರು ಬಾಹ್ಯಾಕಾಶ ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿ ರೂಢಿಸಿಕೊಳ್ಳಬೇಕು.
ಇಸ್ರೋ ಸಂಸ್ಥೆಯು ಚಂದ್ರಯಾನ, ಆದಿತ್ಯ ಎಲ್-1 ಎಂಬ ಉಪಗ್ರಹವನ್ನು ಉಡಾವಣೆ ಮಾಡುವ ಮೂಲಕ ವಿಶ್ವದ ಗಮನ ಸೆಳೆದಿದೆ. ಇಸ್ರೋ 2040ಕ್ಕೆ ಚಂದ್ರನ ಮೇಲೆ ಮಾನವನನ್ನು ಕಳುಹಿಸುವ ಗುರಿ ಹೊಂದಿದೆ ಎಂದರು. ನೆಹರು ತಾರಾಲಯದ ನಿರ್ದೇಶಕ ಡಾ. ಗುರುಪ್ರಸಾದ್, ವಿಜ್ಞಾನಿಗಳಾದ ಡಾ. ಆನಂದ್, ಲಕ್ಷ್ಮೀ, ಶರಣ್ಯಾ, ಡಯಟ್ ಉಪ ನಿರ್ದೇಶಕರಾದ ಪುಷ್ಪಲತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ವರದರಾಜು, ಅಮೃತೇಶ್, ಬಸವರಾಜು, ಬಿ.ಆರ್.ಸಿ ರವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net