ಇಸ್ರೋ ವಿಜ್ಞಾನಿ ಶ್ರೀನಿವಾಸ ಹೆಗಡೆ ನಿಧನ

Vijayavani-Featured-Image
Published on

ಬೆಂಗಳೂರು: ಇಸ್ರೋ ವಿಜ್ಞಾನಿ, ಚಂದ್ರಯಾನ-1ರ ಯೋಜನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಶ್ರೀನಿವಾಸ ಹೆಗಡೆ (71) ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚಿಗೆ ಅವರು ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಹೃದಯಾಘಾತಕ್ಕೆ ಒಳಗಾದ ವೇಳೆ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಅಸುನೀಗಿದ್ದಾರೆ.

ಮೂಲತ: ಉಡುಪಿ ಜಿಲ್ಲೆಯ ಕಾರ್ಕಳದವರಾದ ಹೆಗಡೆಯವರು 1978ರಲ್ಲಿ ಇಸ್ರೋ ಸೇರಿದರು. ಅಲ್ಲಿಂದ ಮೂರೂವರೆ ದಶಕಗಳ ಅವರು ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ 2014ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-1ರ ಯೋಜನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀನಿವಾಸ ಹೆಗಡೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net