ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

04-GPT-1
Published on


ಚಾಮರಾಜನಗರ : ಹತ್ತಾರು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಹಿಡುವಳಿ ಪತ್ರ ನೀಡಲಾಗುತ್ತಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಾಗುವಳಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಹಕ್ಕುಪತ್ರಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.


ಭೂರಹಿತ ರೈತರು ಸರ್ಕಾರಿ ಭೂಮಿಯನ್ನು ತಲೆಮಾರುಗಳಿಂದಲೂ ಉಳುಮೆ ಮಾಡುತ್ತಿದ್ದರೂ ಯಾವುದೇ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗದಂತಾಗಿತ್ತು. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಹಿಡಿವಳಿ ಪಡೆಯಲು ಅರ್ಜಿ ಸಲ್ಲಿಸಿದ್ದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂಮಿಯ ಹಕ್ಕುಪತ್ರ ವಿತರಿಸಿದೆ. ಫಲಾನುಭವಿಗಳು ಇದರ ಸದುಪಯೋಗ ಪಡೆದು ಅಭಿವೃದ್ಧಿಹೊಂದಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ತಹಸೀಲ್ದಾರ್ ರಮೆಶ್ ಬಾಬು, ಪುರಸಭೆ ಮುಖ್ಯಾಧಿಕಾರಿ ವಸಂತಾ ಕುಮಾರಿ, ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ಸರಬರಾಜು ವಿಭಾಗದ ಎಇಇ ವಿಜಯಕುಮಾರ್, ಪಶುಸಂಗೋಪನಾ ಇಲಾಖೆಯ ಸಹಾಯ್ಕ ನಿರ್ದೇಶಕ ಡಾ.ಮೋಹನ್ ಕುಮಾರ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net