ಹೋಂಸ್ಟೇ ನೋಂದಣಿ ಪ್ರಮಾಣ ಪತ್ರ ವಿತರಣೆ

MDK04
Published on

ಮಡಿಕೇರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಆನ್‌ಲೈನ್ ಪೋರ್ಟಲ್‌ನಲ್ಲಿ ನೂತನವಾಗಿ ನೋಂದಣಿಗೊಂಡಿರುವ ಹೋಂ-ಸ್ಟೇಗಳಿಗೆ ಶಾಸಕ ಡಾ.ಮಂತರ್ ಗೌಡರವರು ಮಂಗಳವಾರ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು.


ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೋಟೆಲ್ ಮತ್ತು ರೆಸಾರ್ಟ್‌ಗಳು ಕೂಡ ನಿಯಮಗಳನ್ನು ಪಾಲಿಸಿ ಪ್ರವಾಸೋದ್ಯಮ ಇಲಾಖೆಯ ಕೆ.ಟಿ.ಟಿ.ಎಫ್ ಆನ್‌ಲೈನ್ ಪೋರ್ಟಲ್‌ನಲ್ಲಿ ನೋಂದಾಯಿಸಿಗೊಳ್ಳುವಂತೆ ಕರೆ ನೀಡಿದರು.


ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಅನಿತಾ ಭಾಸ್ಕರ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಜತೀನ್ ಬೋಪಣ್ಣ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net