ಕೊಟ್ಟ ಭರವಸೆ ಈಡೇರಿಸಿದ ಕಾಂಗ್ರೆಸ್

mkg
Published on

ಚನ್ನಗಿರಿ: ರಾಜ್ಯದ ಜನತೆಗೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಉಚಿತ ಬಸ್ ಸೌಲಭ್ಯ, ಪಡಿತರ ಅಕ್ಕಿ, ಭಾಗ್ಯಲಕ್ಷ್ಮಿ ಯೋಜನೆ ಸೇರಿದಂತೆ ಪ್ರತಿಯೊಂದು ಭರವಸೆ ಈಡೇರಿಸಿದೆ ಎಂದು ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದರು.

ತಾಲೂಕಿನ ಸಂತೇಬೆನ್ನೂರು ನಂಜುಂಡೇಶ್ವರ ಸಮುದಾಯ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ಸರ್ಕಾರದ ವಿವಿಧ ಯೋಜನೆಗಳ 241 ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.

ಫಲಾನುಭವಿಗಳು ಸರ್ಕಾರದ ಯೋಜನೆ ಪಡೆಯವ ಸಲುವಾಗಿ ಅರ್ಜಿ ಹಿಡಿದು ಕಚೇರಿಗಳಿಗೆ ಅಲೆಯಬಾರದು. ಅದಕ್ಕಾಗಿ ಎಲ್ಲ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಜನರಿಗೆ ಸರ್ಕಾರದ ಯೋಜನೆ ತಲುಪಿಸಬೇಕು. ಎಲ್ಲರಿಗೂ ಸರ್ಕಾರಿ ಕೆಲಸ ಸಿಗುವುದಿಲ್ಲ. ದೇವರು ಜನರ ಸೇವೆ ಮಾಡಲು ಅವಕಾಶ ನಿಮಗೆ ನೀಡಿದ್ದಾನೆ. ಅದನ್ನು ಬಳಕೆ ಮಾಡಿಕೊಂಡು ಜನರ ಸೇವೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿ ಹೇಳಿದರು.

ತಹಸೀಲ್ದಾರ್ ಪಿ.ಎಸ್. ಯರಿಸ್ವಾಮಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ಪ್ರಕಾಶ್, ಕೋಗಲೂರು ಗ್ರಾಪಂ ಅಧ್ಯಕ್ಷ ಲೋಕೇಶ್, ಸಂತೇಬೆನ್ನೂರು ಗ್ರಾಪಂ ಉಪಾಧ್ಯಕ್ಷ ಲಕ್ಷ್ಮಮ್ಮ, ಬಿಸಿಎಂ ಅಧಿಕಾರಿ ರವಿ, ಬಿಇಒ ಡಾ.ಎಸ್. ಶಂಕರಪ್ಪ, ಪಿಎಸ್‌ಐ ರೂಪ ತೆಂಬದ್, ಅರ್.ಐ. ವಿಶ್ವನಾಥ್, ಪಿಡಿಒ ಗೋಪಾಲಕೃಷ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net