ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅಧಿಸೂಚನೆ ಹೊರಡಿಸಿ

S.R.Patil
Published on

ಬ್ಯಾಡಗಿ: ರಾಜ್ಯದ ವಿವಿಧ ನಗರಸಭೆ, ಪುರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ವಿಳಂಬದಿಂದ ಸಾರ್ವಜನಿಕರಿಗೆ ಸರ್ಮಕವಾಗಿ ಸೇವೆ ಲಭ್ಯವಾಗುತ್ತಿಲ್ಲ.

ಕೂಡಲೇ ಮೀಸಲಾತಿ ಸಮಸ್ಯೆ ಇತ್ಯರ್ಥಪಡಿಸಿ, ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮಹಾಮಂಡಳ ಅಧ್ಯಕ್ಷ ಎಸ್.ಆರ್. ಪಾಟೀಲ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿಯ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಕೆಲ ಸದಸ್ಯರು ಮೀಸಲಾತಿ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿರುವ ಮಾಹಿತಿ ಇದೆ.

ಜನರಿಂದ ಆಯ್ಕೆಯಾದ ಸದಸ್ಯರು ವರ್ಷಗಟ್ಟಲೆ ಅಧಿಕಾರದಿಂದ ವಂಚಿತರಾಗಿದ್ದು, ಆಡಳಿತಾತ್ಮಕವಾಗಿ ಹಿನ್ನಡೆ ಅನುಭವಿಸುವಂತಾಗಿದೆ.

ಇಂತಹ ವಿಷಯಕ್ಕಾಗಿ ಜನರಲ್ ಅಡ್ವೋಕೇಟ್ ಹಾಗೂ ಸರ್ಕಾರಿ ವಕೀಲರಿದ್ದು, ನ್ಯಾಯಾಲಯದಲ್ಲಿ ಈವರೆಗೂ ಇತ್ಯರ್ಥಗೊಳಿಸದಿರುವುದು ಖೇದಕರ ಎಂದು ತಿಳಿಸಿದ್ದಾರೆ.

ಸಂವಿಧಾನದ 73, 74ನೇ ಕಲಂ ತಿದ್ದುಪಡಿಯಾದ ನಂತರ ಆಡಳಿತಾಧಿಕಾರಿಗಳೇ ಜನಪ್ರತಿನಿಧಿಗಳ ಕಾರ್ಯನಿರ್ವಹಿಸುತ್ತಿರುವುದು ನೋವಿನ ಸಂಗತಿಯಾಗಿದೆ.

ಜನಪ್ರತಿನಿಧಿಗಳನ್ನು ಆಯ್ಕೆಗೊಳಿಸಿದ ಬಳಿಕ ಸಮರ್ಪಕವಾಗಿ ಅಧಿಕಾರ ನೀಡದಿದ್ದಲ್ಲಿ ಏನು ಪ್ರಯೋಜನ ? ಸರ್ಕಾರ ಕೂಡಲೇ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net