ಸಂಬಂಧದಲ್ಲಿ ಹುಳಿ ಹಿಂಡುವ ಕೆಲಸವಾಯಿತು

11 ckm 3
ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ವಿವಿಧ ಮುಖಂಡರು ಶಕ್ತಿ ಪ್ರದರ್ಶನ ಮಾಡಿದರು.
Published on

ಚಿಕ್ಕಮಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಹೋರಾಟದಿಂದ ಪ್ರೇರೇಪಿತನಾಗಿ ನಾನು ಬಿಜೆಪಿಗೆ ಬಂದಿದ್ದು. ಆದರೆ ನನ್ನ ಅವರ ಸಂಬಂಧದಲ್ಲಿ ಹುಳಿ ಹಿಂಡುವ ಕೆಲಸ ನಡೆಯಿತು. ನನ್ನ ನಿಷ್ಠೆಯನ್ನು ನಾನು ಎದೆ ಬಗೆದು ತೋರಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದರು.

ಕಡೂರು ತಾಲೂಕು ಸಖರಾಯಪಟ್ಟಣದಲ್ಲಿ ನಡೆದ ಬಿಜೆಪಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಎಂದೂ ಪಕ್ಷಕ್ಕೆ ದ್ರೋಹ ಮಾಡಲಿಲ್ಲ. ಯಡಿಯೂರಪ್ಪ ಅವರು ಅಧಿಕಾರ ನೀಡಿದಾಗ ರಾಜ್ಯದ ಜನ ಮೆಚ್ಚುವಂತೆ ಕೆಲಸ ಮಾಡಿ ತೋರಿಸಿದ್ದೇನೆ ಎಂದು ಯಡಿಯೂರಪ್ಪ ಅವರನ್ನು ಹಾಡಿಹೊಗಳಿದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ. ರವಿಗೆ ವಿಧಾನಸಭೆ ಅಥವಾ ವಿಧಾನಪರಿಷತ್ ನಲ್ಲಿ ಸ್ಥಾನ ಸಿಗಲೇಬೇಕು. ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net