ಹುತಾತ್ಮರನ್ನು ಸ್ಮರಿಸುವುದು ಕರ್ತವ್ಯ

ಜೆಎಂಎಫ್ ಸಿ ಸಿವಿಲ್ ನ್ಯಾಯಾಲಯ
ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on

ಕೆ.ಆರ್.ಪೇಟೆ: ತಮ್ಮ ತ್ಯಾಗ, ಬಲಿದಾನದ ಮೂಲಕ ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರೃ ತಂದುಕೊಟ್ಟ ಹುತಾತ್ಮರನ್ನು ಸ್ಮರಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆ.ಆರ್.ಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಸುಧೀರ್ ಅಭಿಪ್ರಾಯಪಟ್ಟರು.

ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಭಕ್ತಿ ನಮನ ಸಲ್ಲಿಸಿದರು.

ನಮ್ಮ ಹಿರಿಯರು ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಪ್ರಾಣ ಅರ್ಪಣೆ ಮಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ತಮ್ಮ ಅಹಿಂಸಾ ಹೋರಾಟದ ಮೂಲಕ ವಿಶ್ವದಾದ್ಯಂತ ಸಂಚಲನ ಮೂಡಿಸುವ ಜತೆಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಶಸ್ವಿಯಾದ ಮಹಾತ್ಮ ಗಾಂಧೀಜಿ ಅವರು ನಾಥುರಾಮ್ ಗೋಡ್ಸೆಯ ಬಂದೂಕಿನ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ಈ ದಿನದಂದು ಹುತಾತ್ಮರ ದಿನ ಆಚರಿಸಲಾಗುತ್ತಿದೆ. ಅವರಿಗೆ ಇಂದು ನಮನ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ದೇವರಾಜು, ಅರ್ಪಿತಾ, ಹಿರಿಯ ವಕೀಲರಾದ ಬಿ.ಎಲ್.ದೇವರಾಜು, ರವಿಶಂಕರ್, ರಾಜೇಗೌಡ, ಶಿಕ್ಷಕರಾದ ನೀಲಾಮಣಿ, ರಾಜಮ್ಮ, ಗೌರಮ್ಮ, ಸಿಡಿಪಿಓ ಅರುಣ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net