ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವುದು ಸೂಕ್ತ : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

M-Lakshmana
Published on

ಮೈಸೂರು: ಜನರಿಗೆ ಕಾಂಗ್ರೆಸ್ ‘ಗ್ಯಾರಂಟಿ ಯೋಜನೆಗಳು’ ಇಷ್ಟವಾಗಿಲ್ಲ ಎಂಬುದು ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಳನ್ನು ಮರು ಪರಿಶೀಲನೆ ನಡೆಸುವುದು ಸೂಕ್ತ ಎಂದು ಕೆಪಿಸಿಸಿ ವಕ್ತಾರ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದರು.

ಗ್ಯಾರಂಟಿ ಯೋಜನೆಯ ವಿರುದ್ಧ ಬಿಜೆಪಿಯವರು ಮಾತನಾಡುತ್ತಿದ್ದರು. ಜನರು ಸಹ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಉತ್ತಮ. ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಮರುಪರಿಶೀಲನೆ ಮಾಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಮೇಲ್ವರ್ಗದ ಶೇ.70 ರಷ್ಟು ಜನರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ, ಜನರು ಕಾಂಗ್ರೆಸ್‌ಅನ್ನು ಬೆಂಬಲಿ ಸದೆ ಗ್ಯಾರಂಟಿ ಯೋಜನೆಗಳನ್ನು ತರಿಸ್ಕರಿಸಿದ್ದಾರೆ. ಬೆಂಜ್ ಕಾರು ಹೊಂದಿರುವವರು, 25 ಸಾವಿರ ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ಗುರುತಿಸಿ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net