ಮೋದಿ ಪ್ರಧಾನಿಯಾಗುವುದು ಶತಸಿದ್ಧ

Ramadas
Published on


ಮೈಸೂರು:
ಲೋಕಸಭೆಯ ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಲಿದ್ದು, ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗುವುದು ಶತಃಸಿದ್ಧ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಎಲ್ಲ ರಂಗಗಳಲ್ಲೂ ಸಮಗ್ರ ಅಭಿವೃದ್ಧಿ ಆಗಿದೆ. ಮೋದಿ ಪ್ರತಿನಿಧಿಸುತ್ತಿರುವ ವಾರಾಣಸಿಯ ಚಿತ್ರಣ ಕಳೆದ ಹತ್ತು ವರ್ಷಗಳಲ್ಲಿ ಸಂಪೂರ್ಣ ಬದಲಾಗಿದೆ. ಮೋದಿ ಪರವಾಗಿ ವಾರಾಣಸಿಯಲ್ಲಿ ಪ್ರಚಾರ ನಡೆಸಿದ ವೇಳೆ ಅಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಕಣ್ಣಾರೆ ಕಂಡಿದ್ದೇನೆ. ಮೋದಿ ನಾಯಕತ್ವದಲ್ಲಿ ದೇಶ ಬಲಿಷ್ಠವಾಗಿದ್ದು, ಅವರನ್ನು ಸರಿಗಟ್ಟುವ ನಾಯಕ ಐಎನ್‌ಡಿಐಎ ಮೈತ್ರಿಕೂಟದಲ್ಲಿ ಇಲ್ಲ. ಹಾಗಾಗಿ ದೇಶದ ಜನತೆ ಮೋದಿಯೇ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಯಸಿದ್ದಾರೆ ಎಂದರು.

ಕಾಂಗ್ರೆಸ್‌ನವರು ಚುನಾವಣೋತ್ತರ ಸಮೀಕ್ಷೆಗಳನ್ನು ಒಪ್ಪದೆ ಹತಾಶಗೊಂಡಿದ್ದಾರೆ. ಮೋದಿ 3ನೇ ಬಾರಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net