ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಕೆ.ಎಸ್.ಈಶ್ವರಪ್ಪ

EX DCM K S Eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು, ನರೇಂದ್ರ ಮೋದಿ ಪ್ರಧಾನಿ ಆಗುವುದು ನೂರಕ್ಕೆ ನೂರು ನಿಶ್ಚಿತ. ಅದಕ್ಕೆ ಸಮೀಕ್ಷೆಗಳ ಅಗತ್ಯವೇ ಇರಲಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆ ಎಂಬುದು ನಿಮಿತ್ತ ಮಾತ್ರವಾಗಿತ್ತು. ಮೋದಿ ಅವರು 140 ಕೋಟಿ ಜನರ ಹೃದಯ ಗೆದ್ದಿದ್ದಾರೆ. ಮತ್ತೊಮ್ಮೆ ಪ್ರಧಾನಿ ಆಗಲಿದ್ದು, ಸಮೀಕ್ಷೆಗಳು ಕೂಡ ಪೂರಕವಾಗಿ ಬಂದಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್‌ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರ ಮಧ್ಯಾಹ್ನದವರೆಗೂ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂದು ಹೇಳುತ್ತಲೇ ಇರುತ್ತಾರೆ. ಮಧ್ಯಾಹ್ನದ ನಂತರ ಅವರ ವರಸೆ ಬದಲಾಗುತ್ತದೆ. ಸೋತ ಮೇಲೆ ಇವಿಎಂಗಳು ಸರಿಯಿಲ್ಲ ಎಂದು ಆರೋಪಿಸುತ್ತಾರೆ ಎಂದರು.
ರಾಜ್ಯದಲ್ಲೂ ಬಿಜೆಪಿ 18ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಸಮೀಕ್ಷೆಗಳೇ ಹೇಳಿವೆ. ಕರ್ನಾಟಕದಲ್ಲಿ ಬಿಜೆಪಿ ಭವಿಷ್ಯವನ್ನು ಯಾರೂ ಹಾಳುಮಾಡುವುದಕ್ಕೆ ಸಾಧ್ಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದು ಅದನ್ನು ಸರಿಪಡಿಸಲು ಹೋರಾಟ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದು ಸಮೀಕ್ಷೆಗಳು ಹೇಳಿರುವುದು ಆಶ್ಚರ್ಯ ತಂದಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net