ಸಿಎಂ ಸ್ಥಾನ ತ್ಯಜಿಸುವುದು ನಿಶ್ಚಿತ: ರಾಘವೇಂದ್ರ

mp B y Raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on

ಶಿವಮೊಗ್ಗ: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಸಿಕ್ಕಿರುವ ಕಾರಣ ಸಿದ್ದರಾಮಯ್ಯ ಮುಂದಿನ ಕೆಲವೇ ದಿನಗಳಲ್ಲಿ ಸಿಎಂ ಸ್ಥಾನ ತ್ಯಜಿಸಬೇಕಾಗುತ್ತದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಲವು ಹಗರಣಗಳ ಸುಳಿಯಲ್ಲಿ ಸಿಲುಕಿದೆ. ಮೂಡಾದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಕುಟುಂಬಕ್ಕೆ ನಿಯಮ ಬಾಹಿರವಾಗಿ ನಿವೇಶನ ಪಡೆದು ಸಾರ್ವಜನಿಕ ಹಿತಾಸಕ್ತಿಯನ್ನು ಸಂಪೂರ್ಣ ಮರೆತು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹಾಗಾಗಿ ತಮ್ಮ ಎಂದಿನ ಶೈಲಿಯ ಉದ್ದಟತನ ಪ್ರದರ್ಶನ ಮಾಡದೇ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಬಿಜೆಪಿಯವರ ಮೇಲೆ ತನಿಖೆ ನಡೆಸುವುದಾಗಿ ಸಿದ್ದರಾಮಯ್ಯ ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ನಮ್ಮ ಮೇಲೆ ತನಿಖೆ ಮಾಡಿಸುವುದಕ್ಕೆ ವಿರೋಧವಿಲ್ಲ. ಆದರೆ ತಮ್ಮ ಮೇಲೆ ಆರೋಪ ಬಂದಿರುವ ಕಾರಣ ರಾಜೀನಾಮೆ ನೀಡುವುದೇ ಸೂಕ್ತ. ಸಿದ್ದರಾಮಯ್ಯ ರಾಜೀನಾಮೆ ಬಳಿಕ ಸಮರ್ಥರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net