ಡಾ.ಮಹಾಂತ ಶಿವಯೋಗಿಗಳ ತತ್ವಾದರ್ಶ ಪಾಲನೆ ಅವಶ್ಯ

gan (4)
Published on

ಕುಂದಾಪುರ: ಯುವಜನಾಂಗವನ್ನು ಕೆಲವು ಸಮಾಜಘಾತುಕ ಶಕ್ತಿಗಳು ದಾರಿ ತಪ್ಪಿಸುವ ಮತ್ತು ಭವಿಷ್ಯವನ್ನು ಹಾಳು ಮಾಡಲು ಯತ್ನಿಸುತ್ತಿವೆ. ಮದ್ಯಪಾನ, ಧೂಮಪಾನ, ಡ್ರಗ್ಸ್, ಗಾಂಜಾ ಮೊದಲಾದ ವ್ಯವಸಗಳಿಂದ ಜನರನ್ನು ಬಿಡಿಸಲು ಹಳ್ಳಿ, ಊರು, ಕೇರಿಗಳಿಗೆ ಹೋಗಿ ವ್ಯವನಮುಕ್ತರನ್ನಾಗಿ ಮಾಡಲು ಹೋರಾಡಿದ ಡಾ.ಮಹಾಂತ ಶಿವಯೋಗಿಗಳ ಆದರ್ಶಗಳನ್ನು, ತತ್ವಗಳನ್ನು ಪಾಲಿಸಬೇಕು. ಉತ್ತಮ ಪ್ರಜೆಗಳಾಗಬೇಕು ಎಂದು ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಹೇಳಿದರು.

ಕುಂದಾಪುರ ತಾಲೂಕು ಆಡಳಿತ ಆಶ್ರಯದಲ್ಲಿ ಕೋಟೇಶ್ವರದ ಶ್ರೀ ಕಾಳಾವರ ವರದರಾಜ್ ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಯೋಗದೊಂದಿಗೆ ಕೋಟೇಶ್ವರದ ಶ್ರೀ ಕಾಳಾವರ ವರದರಾಜ್ ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಹಾಗೂ ವ್ಯವಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಡಾ.ಮಹಾಂತ ಶಿವಯೋಗಿಗಳು ಜೋಳಿಗೆಯನ್ನು ಕಟ್ಟಿಕೊಂಡು ಬಾಗಲಕೋಟೆ ಜಿಲ್ಲಾದ್ಯಂತ ಊರು ಕೇರಿಗಳನ್ನು ಸುತ್ತುತ್ತ ವ್ಯವಸಗಳನ್ನು ಈ ಜೋಳಿಗೆಯಲ್ಲಿ ಹಾಕಿ ಎಂದು ಹೋರಾಟವನ್ನೇ ರೂಪಿಸಿದ್ದರು. ಧಾರ್ಮಿಕ ಆಚರಣೆಗಳಲ್ಲಿ ಮೂಢನಂಬಿಕೆಯನ್ನು ತೊಡೆದು ಹಾಕಲು ಶ್ರಮಿಸಿದ್ದರು. ನಮ್ಮ ಸಮಾಜದಲ್ಲಿ ಇನ್ನಷ್ಟು ಸುಧಾರಣೆ ಆಗಬೇಕು. ಇದಕ್ಕೆ ಯುವಜನಾಂಗ ಕೈಜೋಡಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸದಸ್ಯ ಸುಬ್ರಹ್ಮಣ್ಯ ಶೆಟ್ಟಿ ಮಾಹಿತಿ ನೀಡಿದರು. ತಾಲೂಕು ಆರೋಗ್ಯ ಅಧಿಕಾರಿ ಡ.ಪ್ರೇಮಾನಂದ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಕಾಲೇಜಿನ ಐಕ್ಯೂಎಸ್‌ಸಿ ಸಂಚಾಲಕ ನಾಗರಾಜ ಯು., ಪ್ರಾಧ್ಯಾಪಕ ರಂಜಿತ್ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಶೇಖರ ಬಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net